ಪಾಟ್ನಾ: ವೇಗವಾಗಿ ಬಂದ ಸ್ಕಾರ್ಪಿಯೋ ಟ್ರಕ್ಗೆ ಡಿಕ್ಕಿ ಹೊಡೆದಿದ್ದರಿಂದ ಮುಂದಿನ ಬೈಕ್ ನೆಗೆದು ಎರಡರ ನಡುವೆ ಸಿಲುಕಿ ಅಪ್ಪಚ್ಚಿಯಾಗಿದೆ. ಸ್ಕಾರ್ಪಿಯೋದಲ್ಲಿದ್ದ ಒಂದೇ ಕುಟುಂಬದ 6 ಜನರು ಮತ್ತು ಚಾಲಕ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದ ಕತಿಹಾರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 31ರಲ್ಲಿ ನಡೆದಿದೆ. ಈ ಭೀಕರವಾದ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಕ್ರೂಸರ್ ಚಾಲಕ ವೇಗವಾಗಿ ಬಂದು ಟ್ರಕ್ಗೆ ಗುದ್ದಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಕ್ರೂಸರ್ ಮೂವರು ಮಕ್ಕಳು ಸೇರಿದಂತೆ ಒಟ್ಟು 10 ಜನ ಪ್ರಯಾಣಿಸುತ್ತಿದ್ದರು. ಗಾಯಾಳುಗಳನ್ನು ಕುರ್ಷೇಲಾದ ಹೆಲ್ತ್ ಕೇರ್ ಸೆಂಟರ್ಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ ಎಂದು ಪೊಲೀಸರು ಹೇಳಿದ್ದಾರೆ.
