Home Kannada ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿ ಬರ್ಬರ ಹತ್ಯೆ: ಹಳೆ ದ್ವೇಷ ಶಂಕೆ

ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿ ಬರ್ಬರ ಹತ್ಯೆ: ಹಳೆ ದ್ವೇಷ ಶಂಕೆ

by Eha

ಬೆಂಗಳೂರು: ತಲೆಮೇಲೆ ಕಲ್ಲು ಎತ್ತಿಹಾಕಿ, ಡ್ರ್ಯಾಗರ್​ನಿಂದ ತಿವಿದು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಘಟನೆ ಎಲೆಕ್ಟ್ರಾನಿಕ್​ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸೈಯದ್ ಅಫ್ಸಲ್ (35) ಕೊಲೆಯಾದ ವ್ಯಕ್ತಿ. ಈತ ಎಲೆಕ್ಟ್ರಾನಿಕ್ ಸಿಟಿ ಬಳಿಯ ಶಿಕಾರಿಪಾಳ್ಯದ ನಿವಾಸಿಯಾಗಿದ್ದು, ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂದು ಹೇಳಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಬಳಿಯ ನಿರ್ಜನ ಪ್ರದೇಶದಲ್ಲಿ ಕೃತ್ಯ ನಡೆದಿದೆ. ತನ್ನ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಅಡ್ಡಗಟ್ಟಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಡ್ರ್ಯಾಗರ್​ನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಎಲೆಕ್ಟ್ರಾನ್ ಸಿಟಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೃತ್ಯದ ಪರಿಶೀಲನೆ ನಡೆಸಿ, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Related Posts

Leave a Comment