Home Kannada ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಐವರಿಗೆ ಗಂಭೀರ ಗಾಯ

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಐವರಿಗೆ ಗಂಭೀರ ಗಾಯ

by Eha

ಬಂಟ್ವಾಳ: ತಾಲೂಕಿನ ವಿಟ್ಲದ ಕಾಶಿಮಠ ಎಂಬಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಒಟ್ಟು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿ ಘಟನೆ ನಡೆದಿದೆ.ವಿಟ್ಲ ಸಮೀಪದ ಕೇಪು ಕಡೆಯಿಂದ ವಿಟ್ಲ ಪೇಟೆಗೆ ಬಂದು ತನ್ನ ಸ್ನೇಹಿತನನ್ನು ಬೆಂಗಳೂರು ಬಸ್​ಗೆ ಬಿಡಲೆಂದು ಡಿಯೋ ವಾಹನದಲ್ಲಿ ಬರುತ್ತಿದ್ದಾಗ, ವಿಟ್ಲ ಕಡೆಯಿಂದ ಕನ್ಯಾನ ಕಡೆಗೆ ತೆರಳುತ್ತಿದ್ದ ಬೈಕ್​ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಎರಡು ವಾಹನದಲ್ಲಿದ್ದ ಒಟ್ಟು ಐದು ಮಂದಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಆ್ಯಂಬುಲೆನ್ಸ್​ ಮೂಲಕ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

Related Posts

Leave a Comment