Home Kannada ಬೈಕ್​ ಕಳ್ಳತನ ಮಾಡುತ್ತಿದ್ದ ಖದೀಮನನ್ನ ಬಂಧಿಸಿದ ಪೊಲೀಸರು

ಬೈಕ್​ ಕಳ್ಳತನ ಮಾಡುತ್ತಿದ್ದ ಖದೀಮನನ್ನ ಬಂಧಿಸಿದ ಪೊಲೀಸರು

by Eha

ಬೆಂಗಳೂರು: ಮಾಗಡಿ ರಸ್ತೆ ಪೊಲೀಸರು ಕಾರ್ಯಾಚರಣೆ ನಡೆಸಿ ಪಾರ್ಕಿಂಗ್​ನಲ್ಲಿ ನಿಲ್ಲಿಸುವ ಬೈಕ್​ಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಂಚಿತ್ ಆರ್. ಬಂಧಿತ ಆರೋಪಿಯಾಗಿದ್ದು, ಜನವರಿ 25ರಂದು ಮಾಗಡಿ ರಸ್ತೆ ಹತ್ತಿರ ಮನೆ ಮುಂದೆ ‌ನಿಲ್ಲಿಸಿದ್ದ ಹೊಂಡಾ ಆಕ್ಟಿವಾ ಬೈಕ್​ನ್ನು ಕಳ್ಳತನ ಮಾಡಿದ್ದ. ಈ ಘಟನೆ ಕುರಿತು ಮಾಗಡಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿ ರಂಚಿತ್​​ನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ 1.65 ಲಕ್ಷದ ಮೌಲ್ಯದ ಬೆಲೆ ಬಾಳುವ ಬೈಕ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆ ಕುರಿತು ಮಾಗಡಿ‌ ರಸ್ತೆಯ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪ್ರಕರಣ ಭೇದಿಸಿದ ಇನ್ಸ್ ಪೆಕ್ಟರ್ ಶ್ರೀನಿವಾಸ್ ಮತ್ತು ತಂಡಕ್ಕೆ ಸಾರ್ವಜನಿಕರು ಹಾಗೂ ಹಿರಿಯ ಅಧಿಕಾರಿಗಳು ಶ್ಲಾಘಿಸಿದ್ದಾರೆ.

Related Posts

Leave a Comment