Home Kannada ಮೈಸೂರು: ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನಿಗೆ 10 ವರ್ಷ ಜೈಲು

ಮೈಸೂರು: ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನಿಗೆ 10 ವರ್ಷ ಜೈಲು

by Eha

ಮೈಸೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಶಿಕ್ಷಕನಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ಮೈಸೂರಿನ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ನವೆಂಬರ್​​​ 2016ರಲ್ಲಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ತೀರ್ಪು ಹೊರ ಬಿದ್ದಿದ್ದು, ಅಪರಾಧಿಗೆ 10 ವರ್ಷ ಜೈಲು ಹಾಗೂ 50 ಸಾವಿರ ದಂಡ ವಿಧಿಸಲಾಗಿದೆ.

ಮೈಸೂರು ನಗರದ ಹುಲ್ಲಿನ ಬೀದಿಯಲ್ಲಿ ಕೆ.ಎಂ. ಕೋಚಿಂಗ್ ಸೆಂಟರ್ ನಡೆಸುತ್ತಿದ್ದ ಶಿಕ್ಷಕನೊಬ್ಬ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಟಾಪರ್ ಮಾಡುವುದಾಗಿ ಆಮಿಷವೊಡ್ಡಿ 14 ವರ್ಷದ ಬಾಲಕಿಗೆ ಕೋಚಿಂಗ್ ನೀಡುತ್ತಿದ್ದನು. ಈ ವೇಳೆ ಒಂದು ದಿನ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ‌ ಕಿರುಕುಳ ನೀಡಿದ್ದನು. ಈ ಸಂಬಂಧ ಕೆ.ಆರ್. ಪೊಲೀಸ್ ಠಾಣೆಯಲ್ಲಿ ಪೋಕ್ಸೋ‌ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ಪೋಕ್ಸೋ ವಿಶೇಷ ನ್ಯಾಯಾಧೀಶರಾದ ಬಿ.ಎಸ್.ಜಯಶ್ರೀ ಅವರು ತೀರ್ಪು ಪ್ರಕಟಿಸಿದ್ದಾರೆ. ದೌರ್ಜನ್ಯಕ್ಕೆ ಒಳಗಾದ ಬಾಲಕಿಗೆ ಸೂಕ್ತ ಪರಿಹಾರ ನೀಡಲು ಕೋರ್ಟ್ ಆದೇಶಿಸಿದೆ.

Related Posts

Leave a Comment