ತಿರುವನಂತಪುರಂ: ಮೀನು ಸಾಗಿಸುತ್ತಿದ್ದ ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಕಲ್ಲಂಬಲಂ ಬಳಿಯ ತೊಟ್ಟಾಯಕ್ಕಾಡ್ನಲ್ಲಿ ನಡೆದಿದೆ. ಮೃತರನ್ನು ವಿಷ್ಣು, ರಾಜೀವ್, ಅರುಣ್, ಸುಧೀಶ್ ಮತ್ತು ಸೂರ್ಯ ಉದಯಕುಮಾರ್ ಎಂದು ಗುರುತಿಸಲಾಗಿದೆ. ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಲಾರಿ-ಕಾರು ಮಧ್ಯೆ ಭೀಕರ ಅಪಘಾತ.. ಐವರ ದುರ್ಮರಣ
previous post