Home Kannada ಶಿರಾಡಿ ಘಾಟ್​​ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಸಂಚಾರಕ್ಕೆ ತಡೆ

ಶಿರಾಡಿ ಘಾಟ್​​ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಸಂಚಾರಕ್ಕೆ ತಡೆ

by Eha

ಶಿರಾಡಿ: ಮಂಗಳೂರು – ಬೆಂಗಳೂರು ರಾಷ್ಟೀಯ ಹೆದ್ದಾರಿಯ ಶಿರಾಡಿ ಘಾಟ್​ನ ಕೆಂಪುಹೊಳೆ ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಘಟನೆ ನಡೆದಿದ್ದು, ರಸ್ತೆ ಸಂಚಾರಕ್ಕೆ ತಡೆ ಉಂಟಾಗಿದೆ. ಕೆಂಪುಹೊಳೆ ಸಮೀಪ ಮಂಗಳೂರಿನಿಂದ ಗ್ಯಾಸ್ ತುಂಬಿಸಿಕೊಂಡು ಬೆಂಗಳೂರು ಕಡೆಗೆ ಹೊರಟಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು, ಪರಿಣಾಮ ಟ್ಯಾಂಕರ್​​​ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಬಗ್ಗೆ ಮಾಹಿತಿ ಲಭಿಸಿದೆ. ಟ್ಯಾಂಕರ್​ ಪಲ್ಟಿಯಾದ ಪರಿಣಾಮ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ತಡೆಯಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತೆರಳುವ ವಾಹನಗಳಿಗೆ ಮಾಣಿ – ಮೈಸೂರು ರಸ್ತೆಯಲ್ಲಿ ಸಂಚಾರ ಮಾಡುವಂತೆ ತಿಳಿಸಲಾಗಿದೆ. ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ನೆಟ್​ವರ್ಕ್​​​ ಸಮಸ್ಯೆಯಿಂದಾಗಿ ತೆರವು ಕಾರ್ಯಾಚರಣೆ ವಿಳಂಬವಾಗುತ್ತಿದೆ ಎನ್ನಲಾಗಿದೆ.

Related Posts

Leave a Comment