Home Kannada ಅಂತರ್ ಜಿಲ್ಲಾ ಬೈಕ್ ‌ಕಳ್ಳನ ಬಂಧನ, 8 ಬೈಕ್​ಗಳು ವಶ

ಅಂತರ್ ಜಿಲ್ಲಾ ಬೈಕ್ ‌ಕಳ್ಳನ ಬಂಧನ, 8 ಬೈಕ್​ಗಳು ವಶ

by Eha

ದಾವಣಗೆರೆ: ಜಿಲ್ಲೆಯ ಚನ್ನಗಿರಿ ಪೊಲೀಸ್​ ಠಾಣೆಯ ಪೊಲೀಸರು ಅಂತರ ಜಿಲ್ಲಾ ಬೈಕ್​ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದ ನಿವಾಸಿ ಈರಣ್ಣ ಅಲಿಯಾಸ್ ಸರೇಶ್​ನನ್ನು ಪೊಲೀಸರು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಆರೋಪಿ ಈರಣ್ಣ ವಿವಿಧ ಜಿಲ್ಲೆಯಲ್ಲಿ ನಾಲ್ಕು ಲಕ್ಷ ಮೌಲ್ಯ ಬೆಲೆ ಬಾಳುವ ವಿವಿಧ ಕಂಪನಿಯ 8 ಬೈಕ್ ಗಳನ್ನು ಕಳ್ಳತನ ಮಾಡಿ ತಲೆಮರಿಸಿಕೊಂಡಿದ್ದನು. ಪತ್ತೆ ಹಚ್ಚಿದ ಪೊಲೀಸರು ಆರೋಪಿ ಈರಣ್ಣನಿಂದ ಬೈಕ್​ಗಳನ್ನು ವಶಪಡಿಸಿಕೊಂಡಿದ್ದಾರೆ. ಇನ್ನು ವಶಪಡಿಸಿಕೊಂಡ ಬೈಕ್​ಗಳ ಬಗ್ಗೆ ಆರೋಪಿತನಿಗೆ ಕಳ್ಳತನ ಮಾಡಿದ ಸ್ಥಳಗಳ ಬಗ್ಗೆ ಮಾಹಿತಿ ಇರುವುದಿಲ್ಲ. ಸಿಬ್ಬಂದಿಯ ಕಾರ್ಯವೈಖರಿ ಬಗ್ಗೆ ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಹನುಮಂತರಾಯ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ರಾಜೀವ್‌.ಎಂ ಪ್ರಶಂಸೆ ವ್ಯಕ್ತ ಪಡಿಸಿದರು.

Related Posts

Leave a Comment