Home Kannada ಅಗ್ನಿ ಅವಘಡ: ಒಂದೇ ಕುಟುಂಬದ 5 ಮುಂದಿ ಬಲಿ

ಅಗ್ನಿ ಅವಘಡ: ಒಂದೇ ಕುಟುಂಬದ 5 ಮುಂದಿ ಬಲಿ

by Eha

ಕಿಶನ್​ಗಂಜ್​​( ಬಿಹಾರ): ಮನೆಯಲ್ಲಿ ದಿಢೀರ್​ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಒಂದೇ ಕುಟುಂಬದ 5 ಮುಂದಿ ಸಾವನ್ನಪ್ಪಿರುವ ಘಟನೆ ಬಿಹಾರದ ಕಿಶನ್‌ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಕಿಶನ್‌ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಸಲಾಮ್ ಕಾಲೋನಿಯ ನೂರ್ ಆಲಂ ಎಂಬುವರ ಮನೆಯಲ್ಲಿ ಈ ಅಗ್ನಿ ದುರಂತ ಸಂಭವಿಸಿದ್ದು, ಓರ್ವ ವ್ಯಕ್ತಿ ಸೇರಿದಂತೆ ನಾಲ್ಕು ಚಿಕ್ಕ ಮಕ್ಕಳು ಬೆಂಕಿಗಾಹುತಿಯಾಗಿದ್ದಾರೆ. ಜೊತೆಗೆ ಓರ್ವ ವ್ಯಕ್ತಿಗೆ ಗಾಯಗಳಾಗಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಭಾನುವಾರ ತಡರಾತ್ರಿ ಘಟನೆ ನಡೆದಿದ್ದು, ಸಮೀಪದಲ್ಲಿರುವ 4 ಮನೆಗಳಿಗೂ ಸಹ ಬೆಂಕಿ ತಗುಲಿದೆ. ಪರಿಣಾಮ ಕೋಟ್ಯಂತರ ರೂ. ಮೌಲ್ಯದ ಸ್ವತ್ತು ಬೆಂಕಿಗಾಹುತಿಯಾಗಿದೆ. ಇನ್ನು ಈ ದುರಂತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರಬಹುದು ಎನ್ನಲಾಗಿದೆ. ಈ ಕುರಿತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶವಗಳನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ಕಳುಹಿಸಲಾಗಿದೆ.

Related Posts

Leave a Comment