Home Kannada ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಪೊಕ್ಸೊ ಪ್ರಕರಣ ದಾಖಲು

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಪೊಕ್ಸೊ ಪ್ರಕರಣ ದಾಖಲು

by Eha

ಮಂಗಳೂರು: ನಾಲ್ಕು ವರ್ಷದ ಮಗುವಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ವ್ಯಕ್ತಿಯೋರ್ವನ ಮೇಲೆ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿದೆ. ನಾಲ್ಕು ವರ್ಷದ ಮಗುವಿಗೆ ನಗರದ ಪಂಜಿಮೊಗರಿನ ರಾಯಿಕಟ್ಟೆ ನಿವಾಸಿ ಗಣೇಶ ಲೈಂಗಿಕ ಕಿರುಕುಳ ನೀಡಿದ ಆರೋಪಿಯಾಗಿದ್ದಾನೆ. ಆರೋಪಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾನೆ. ತನ್ನ ಮನೆ ಮಾಲೀಕರ ನಾಲ್ಕು ವರ್ಷದ ಮಗುವಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಮಗು ಪೋಷಕರಲ್ಲಿ ತಿಳಿಸಿದೆ. ಆದ್ದರಿಂದ ತಕ್ಷಣ ಹೆತ್ತವರು ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಆರೋಪಿಯ ವಿರುದ್ಧ ಪೊಕ್ಸೊ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related Posts

Leave a Comment