Home Kannada ಓವರ್ ಟೇಕ್ ವೇಳೆ ಎಡವಟ್ಟು – ಬೈಕ್ ಸವಾರ ಗಂಭೀರ ಗಾಯ

ಓವರ್ ಟೇಕ್ ವೇಳೆ ಎಡವಟ್ಟು – ಬೈಕ್ ಸವಾರ ಗಂಭೀರ ಗಾಯ

by Eha

ಹುಬ್ಬಳ್ಳಿ: ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ-ಲಕ್ಷ್ಮೇಶ್ವರ ಮಾರ್ಗ ಮಧ್ಯದಲ್ಲಿ ನಡೆದಿದೆ. ಬೈಕ್ ಸವಾರ ಕಾರ್‍ನೊಂದಿಗೆ ಓವರ್ ಟೇಕ್ ಮಾಡಲು ಹೋಗಿ ಕಾರಿಗೆ ಗುದ್ದಿದ್ದಾನೆ. ಈ ವೇಳೆ ಅಪಘಾತ ಸಂಭವಿಸಿದ್ದು ಸವಾರನ ತಲೆಗೆ ಪೆಟ್ಟು ಬಿದ್ದಿದೆ.ಬೈಕ್ ಸವಾರನನ್ನು ಏರೇಬೂದಿಹಾಳದ ನಿವಾಸಿ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈತ ಗಂಭೀರವಾಗಿ ಗಾಯಗೊಂಡಿದ್ದಾನೆ. ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕುಂದಗೋಳ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುಂದಗೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Related Posts

Leave a Comment