Home Kannada ಕಚ್ಛಾ ಬಾಂಬ್​ ಸ್ಫೋಟ: ಬಿಜೆಪಿಯ ಆರು ಕಾರ್ಯಕರ್ತರಿಗೆ ಗಂಭೀರ ಗಾಯ

ಕಚ್ಛಾ ಬಾಂಬ್​ ಸ್ಫೋಟ: ಬಿಜೆಪಿಯ ಆರು ಕಾರ್ಯಕರ್ತರಿಗೆ ಗಂಭೀರ ಗಾಯ

by Eha

ಗೋಸಾಬಾ (ಪಶ್ಚಿಮ ಬಂಗಾಳ): ಕಚ್ಛಾ ಬಾಂಬ್​ ಸ್ಫೋಟಗೊಂಡು ಬಿಜೆಪಿಯ ಆರು ಮಂದಿ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ವಿಧಾನಸಭಾ ಚುನಾವಣೆಯ ಪ್ರಚಾರ ಅಬ್ಬರ ಜೋರಾಗಿದೆ. ಈ ಮಧ್ಯೆ ರಾಜ್ಯದಲ್ಲಿ ಹಿಂಸಾಚಾರ ಮುಂದುವರೆದಿದೆ. ದಕ್ಷಿಣ 24 ಪರಗಣ ಜಿಲ್ಲೆಯ ಗೋಸಾಬಾದಲ್ಲಿ ವಿವಾಹ ಕಾರ್ಯಕ್ರಮ ಮುಗಿಸಿಕೊಂಡು ಹಿಂದಿರುಗುತ್ತಿದ್ದ ವೇಳೆ ಕಚ್ಛಾ ಬಾಂಬ್​ ಸ್ಫೋಟಗೊಂಡು ಆರು ಮಂದಿ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ತೃಣಮೂಲ ಕಾಂಗ್ರೆಸ್​ (ಟಿಎಂಸಿ) ಕಾರ್ಯಕರ್ತರು ನಮ್ಮ ಮೇಲೆ ಬಾಂಬ್ ಎಸೆದಿದ್ದಾರೆ ಎಂದು ಗಾಯಾಳುಗಳು ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ಟಿಎಂಸಿ ತಳ್ಳಿಹಾಕಿದೆ. ಇತ್ತೀಚೆಗಷ್ಟೇ ರಾಜ್ಯದ ಹಲವೆಡೆ ಕಚ್ಛಾ ಬಾಂಬ್​ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Posts

Leave a Comment