Home Kannada ಕಲಬುರಗಿಯಲ್ಲಿ ಆಟೋ ಚಾಲಕನ ಬರ್ಬರ ಹತ್ಯೆ

ಕಲಬುರಗಿಯಲ್ಲಿ ಆಟೋ ಚಾಲಕನ ಬರ್ಬರ ಹತ್ಯೆ

by akash

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಆಟೋ ಚಾಲಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ದರ್ಗಾ ರಸ್ತೆಯ ಸನಾ ಹೋಟೆಲ್ ಬಳಿ ನಡೆದಿದೆ. ಮಿಲ್ಲತ್ ನಗರ ನಿವಾಸಿ ಜೀಶಾನ್ (25) ಕೊಲೆಯಾದ ಆಟೋ ಚಾಲಕ. ನಿನ್ನೆ ರಾತ್ರಿ ಮೂರ್ನಾಲ್ಕು ಜನ ದುಷ್ಕರ್ಮಿಗಳು ಜೀಶಾನ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದರು. ಈ ವೇಳೆ ಮಾರಕಾಸ್ತ್ರ ಜೀಶಾನ್ ದೇಹದಲ್ಲಿಯೇ ಚುಚ್ಚಿಕೊಂಡಿತ್ತು. ಪರಿಣಾಮ, ತೀವ್ರ ರಕ್ತಸ್ರಾವವಾಗಿ ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗಿನ ಜಾವ ಸಾವನ್ನಪ್ಪಿದ್ದಾನೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ರೋಜಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Related Posts

Leave a Comment