Home Kannada ಕಲಬುರಗಿಯಲ್ಲಿ ಬೇಕಾಬಿಟ್ಟಿ ಓಡಾಡುವವರಿಗೆ ಬಸ್ಕಿ ಹೊಡೆಯುವ ಶಿಕ್ಷೆ

ಕಲಬುರಗಿಯಲ್ಲಿ ಬೇಕಾಬಿಟ್ಟಿ ಓಡಾಡುವವರಿಗೆ ಬಸ್ಕಿ ಹೊಡೆಯುವ ಶಿಕ್ಷೆ

by akash

ಕಲಬುರಗಿ: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಲಾಕ್‍ಡೌನ್ ಜಾರಿ ಮಾಡಲಾಗಿದ್ದು, ಸಂಪೂರ್ಣ ಕಟ್ಟೆಚ್ಚರ ವಹಿಸಲಾಗಿದೆ. ಅನಗತ್ಯವಾಗಿ ಸಂಚರಿಸುವವರಿಗೆ ದಂಡ, ವಾಹನ ಸೀಜ್ ಮಾಡುವುದು ಸೇರಿದಂತೆ ವಿವಿಧ ರೀತಿಯಲ್ಲಿ ಬಿಸಿ ಮುಟ್ಟಿಸಲಾಗುತ್ತಿದ್ದು, ಇದೀಗ ನಗರದಲ್ಲಿ ಅನಗತ್ಯವಾಗಿ ಸಂಚರಿಸುವವರಿಗೆ ಬಸ್ಕಿ ಹೊಡೆಲಾಗುತ್ತಿದೆ. ನಗರದಲ್ಲಿ ಲಾಕ್‍ಡೌನ್‍ಗೆ ಸಾರ್ವಜನಿಕರು ಡೋಂಟ್‍ಕೇರ್ ಎಂದು ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದು, ಅನಗತ್ಯವಾಗಿ ಓಡಾಡುತ್ತಿದ್ದ ಬೈಕ್ ಸವಾರರಿಗೆ ಪೊಲೀಸರು ಬಸ್ಕಿ ಹೊಡೆಯುವ ಶಿಕ್ಷೆ ನೀಡಿದ್ದಾರೆ. ನಗರದ ಜಗತ್ ವೃತ್ತದಲ್ಲಿ ರೌಡಿನಿಗ್ರಹ ದಳ ಪಿಎಸ್‍ಐ ವಾಹೀದ್ ಕೊತ್ವಾಲ್‍ರಿಂದ ಸಖತ್ ಟ್ರೀಟ್‍ಮೆಂಟ್ ಶುರುವಾಗಿದ್ದು, ಸುಖಾಸುಮ್ಮನೆ ಒಡಾಡುತ್ತಿದ್ದ ಬೈಕ್ ಸವಾರರಿಗೆ ಬಸ್ಕಿ ಹೊಡೆಸಲಾಗಿದೆ. ಅಲ್ಲದೆ ಲಾಕ್‍ಡೌನ್ ನಿಯಮ ಉಲ್ಲಂಘಿಸಿ ಸಂಚರಿಸಿದರೆ ಪೊಲೀಸರು ಎಚ್ಚರಿಸಿದ್ದಾರೆ. ರಾಜ್ಯದಲ್ಲಿ ದಿನದ ಸೋಂಕಿತರ ಸಂಖ್ಯೆ 40 ಸಾವಿರದ ಗಡಿಯತ್ತ ಸಾಗಿದ್ದು, ಕಲಬುರಗಿಯಲ್ಲಿ ಸಹ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗುತ್ತಿವೆ. ರಾಜ್ಯದ ಹಲವೆಡೆ ಆಕ್ಸಿಜನ್ ಕೊರತೆಯಿಂದ ಜನ ನರಳುತ್ತಿದ್ದಾರೆ. ಇಷ್ಟಾದರೂ ಜನ ಮಾತ್ರ ಎಚ್ಚೆತ್ತುಕೊಂಡಿಲ್ಲ. ಬೇಕಾಬಿಟ್ಟಿಯಾಗಿ ಸಂಚರಿಸುವ ಮೂಲಕ ನಿಯಮ ಉಲ್ಲಂಘಿಸುತ್ತಿದ್ದಾರೆ.

Related Posts

Leave a Comment