Home Kannada ಕುಖ್ಯಾತ ಬೈಕ್ ಕಳ್ಳನ ಬಂಧನ: 7 ದ್ವಿಚಕ್ರ ವಾಹನ ವಶ

ಕುಖ್ಯಾತ ಬೈಕ್ ಕಳ್ಳನ ಬಂಧನ: 7 ದ್ವಿಚಕ್ರ ವಾಹನ ವಶ

by Eha

ಬೆಂಗಳೂರು: ಸಿಲಿಕಾನ್ ಸಿಟಿಯ ಜೆ.ಜೆ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಮನೆ ಮುಂದೆ ನಿಲ್ಲಿಸಿದ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳನನ್ನು ಬಂಧಿಸಿದ್ದಾರೆ. ತೌಫಿಕ್ ಪಾಷಾ ಬಂಧಿತ ಆರೋಪಿ. ಜೆ.ಜೆ ನಗರದ ಸರಹದ್ದಿನಲ್ಲಿ ರಾತ್ರಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್​ಗಳನ್ನು ಕಳ್ಳತನ ಮಾಡಿ, ಆರೋಪಿ ಎಸ್ಕೇಪ್ ಆಗುತ್ತಿದ್ದ. ಈ ಕುರಿತು ಜೆ.ಜೆ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಇನ್ನು ಬಂಧಿತನಿಂದ 4 ಲಕ್ಷ ರೂ. ಬೆಲೆ ಬಾಳುವ 7 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದು, ಈತನ ಮೇಲೆ ಜೆ.ಜೆ ನಗರ , ಕೆ.ಪಿ ಅಗ್ರಹಾರ, ಕಾಟನ್​ಪೇಟೆ, ವಿಜಯನಗರ, ಬ್ಯಾಟರಾಯನಪುರ ಸೇರಿದಂತೆ ಹಲವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿವೆ.

Related Posts

Leave a Comment