Home Kannada ಕೇಶ್ವಾಪೂರ ಪೊಲೀಸರ ಕಾರ್ಯಾಚರಣೆ: ಇಬ್ಬರು ಗಾಂಜಾ ಮಾರಾಟಗಾರರ ಬಂಧನ

ಕೇಶ್ವಾಪೂರ ಪೊಲೀಸರ ಕಾರ್ಯಾಚರಣೆ: ಇಬ್ಬರು ಗಾಂಜಾ ಮಾರಾಟಗಾರರ ಬಂಧನ

by Eha

ಹುಬ್ಬಳ್ಳಿ: ಅವಳಿ ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚುವಲ್ಲಿ ಹುಬ್ಬಳ್ಳಿಯ ಕೇಶ್ವಾಪೂರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಸ್ಯಾಮುವೆಲ್ ಏಸು ಬಿಲ್ಲಾ ಮತ್ತು ನವೀನ್​ ಕುಮಾರ್ ಪುರುಷೋತ್ತಮ ಏಸು ಮಾಲಾ ಬಂಧಿತ ಆರೋಪಿಗಳು. ಇವರು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದರು. ಈ ಕುರಿತಂತೆ ಮಾಹಿತಿ ಪಡೆದ ಪೊಲೀಸರು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ 250 ಗ್ರಾಂ ತೂಕದ 25 ಸಣ್ಣ ಸಣ್ಣ ಗಾಂಜಾ ಪ್ಯಾಕೆಟ್​​​ಗಳು ಮತ್ತು 290 ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಕೇಶ್ವಾಪೂರ ಠಾಣೆ ಪೊಲೀಸರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Related Posts

Leave a Comment