Home Kannada ಕೋವಿಡ್​ ಕೇರ್​ ಸೆಂಟರ್​​ ಶೌಚಾಲಯದಲ್ಲಿ ಸೋಂಕಿತ ಮಹಿಳೆ ಆತ್ಮಹತ್ಯೆ!

ಕೋವಿಡ್​ ಕೇರ್​ ಸೆಂಟರ್​​ ಶೌಚಾಲಯದಲ್ಲಿ ಸೋಂಕಿತ ಮಹಿಳೆ ಆತ್ಮಹತ್ಯೆ!

by akash

ಮಂಡ್ಯ: ಸೋಂಕಿತ ಮಹಿಳೆಯೊಬ್ಬರು ಕೋವಿಡ್ ಕೇರ್ ಸೆಂಟರ್​ನ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ. ಬೇಲೂರು ಗ್ರಾಮದ 55 ವರ್ಷದ ಗೌರಮ್ಮ ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೌರಮ್ಮಗೆ ಎರಡು ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ಮದ್ದೂರು ಕೊವಿಡ್ ಕೇರ್ ಸೆಂಟರ್​​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗೆ ಕೋವಿಡ್ ಕೇರ್ ಸೆಂಟರ್​ನ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Comment