Home Kannada ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿಕೊಂಡು ದಂಪತಿ ಆತ್ಮಹತ್ಯೆ

ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿಕೊಂಡು ದಂಪತಿ ಆತ್ಮಹತ್ಯೆ

by akash

ಮೈಸೂರು : ದಂಪತಿ ನಡುವೆ ಕ್ಷುಲ್ಲಕ ವಿಚಾರಕ್ಕೆ ಆರಂಭವಾದ ಗಲಾಟೆ ಆತ್ಮಹತ್ಯೆಯಲ್ಲಿ ಕೊನೆಯಾಗಿರುವ ಘಟನೆ ನಂಜನಗೂಡು ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ. ಚಂದ್ರಶೇಖರ (30) ಕವಿತಾ (18) ಆತ್ಮಹತ್ಯೆ ಮಾಡಿಕೊಂಡವರು. ಒಂದು ವರ್ಷದ ಹಿಂದೆ ಮದುವೆಯಾಗಿದ್ದ ಇವರು, ಬಹಳ ಅನ್ಯೋನ್ಯವಾಗಿದ್ದರಂತೆ. ಭಾನುವಾರ ಸಣ್ಣ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಇದರಿ‌ಂದ ಮನನೊಂದು ಇಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related Posts

Leave a Comment