ಚಿತ್ರದುರ್ಗ: ಬೆಳಗಿನ ಜಾವ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ, ಹತ್ತಕ್ಕೂ ಅಧಿಕ ಗೂಡಂಗಡಿಗಳು ಸುಟ್ಟು ಕರಕಲಾದ ಘಟನೆ ಚಿತ್ರದುರ್ಗದ ಗಾಂಧಿ ಸರ್ಕಲ್ ಬಳಿ ನಡೆದಿದೆ. ಹೂವು, ಹಣ್ಣು, ಪೂಜಾ ಸಾಮಗ್ರಿಗಳನ್ನು ಮಾರಾಟ ಮಾಡುತ್ತಿದ್ದ ಗೂಡಂಗಡಿಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿ ಅವಘಡದಿಂದ ಅಪಾರ ನಷ್ಟವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದು, ಚಿತ್ರದುರ್ಗ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.