Home Kannada ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡೋಣ: ನೂತನ ಏಳು ಸಚಿವರಿಗೆ ಬಿಎಸ್‌ವೈ ಕರೆ!

ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡೋಣ: ನೂತನ ಏಳು ಸಚಿವರಿಗೆ ಬಿಎಸ್‌ವೈ ಕರೆ!

by Eha

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತ್ಯ ಕಂಡಿದೆ. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ನೂತನ ಏಳು ಸಚಿವರಿಗೆ ಪ್ರಮಾಣವಚನ ಬೋಧಿಸಿದರು.

ಅದರಂತೆ ಎಸ್. ಅಂಗಾರ, ಅರವಿಂದ ಲಿಂಬಾವಳಿ, ಸಿ.ಪಿ ಯೋಗೇಶ್ವರ್‌, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ಆರ್‌. ಶಂಕರ್‌ ಹಾಗೂ ಎಂಟಿಬಿ ನಾಗರಾಜ್‌ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇನ್ನು ತಮ್ಮ ಏಳು ಹೊಸ ಸಹೋದ್ಯೋಗಿಗಳಿಗೆ ಅಭಿನಂದನೆ ಸಲ್ಲಿಸಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯದ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ದುಡಿಯೋಣ ಎಂದು ಕರೆ ನೀಡಿದ್ದಾರೆ.

ಬಿಎಸ್‌ವೈ ಸಂಪುಟಕ್ಕೆ ಏಳು ಸಚಿವರ ಸೇರ್ಪಡೆ, ರಾಜಭವನದಲ್ಲಿ ಪ್ರಮಾಣವಚನ
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ”ರಾಜ್ಯದ ಸಚಿವ ಸಂಪುಟದ ಸದಸ್ಯರಾಗಿ ಇಂದು ಘನತೆವೆತ್ತ ರಾಜ್ಯಪಾಲ ಶ್ರೀ ವಜುಭಾಯಿ ವಾಲಾ ರವರಿಂದ ಪ್ರಮಾಣವಚನ ಸ್ವೀಕರಿಸಿದ ಎಲ್ಲ ಶಾಸಕರಿಗೂ ಹೃತ್ಪೂರ್ವಕ ಅಭಿನಂದನೆಗಳು. ರಾಜ್ಯದ ಅಭಿವೃದ್ಧಿ ನಿಟ್ಟಿನಲ್ಲಿ, ಜನರ ನಿರೀಕ್ಷೆಗಳಿಗೆ ತಕ್ಕಂತೆ ನಮ್ಮ ಕರ್ತವ್ಯಗಳನ್ನು ನಿರ್ವಹಿಸೋಣ”.. ಎಂದು ಕರೆ ನೀಡಿದ್ದಾರೆ.

ತೀವ್ರ ಕಸರತ್ತಿನ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಬಿಎಸ್‌ವೈ ಹೈಕಮಾಂಡ್‌ನಿಂದ ತಮ್ಮ ಪಟ್ಟಿಗೆ ಒಪ್ಪಿಗೆ ಪಡೆಯುವಲ್ಲಿ ಕೊನೆಗೂ ಯಶಸ್ವಿಯಾಗಿರುವುದು ರಾಜ್ಯ ರಾಜಕಾರಣದ ಕುತೂಹಲ ಕೆರಳಿಸಿದೆ.

Related Posts

Leave a Comment