Home Kannada ಡ್ಯೂಟಿ ಮುಗಿಸಿ ಬರುವಾಗ ಎತ್ತಿನ ಗಾಡಿಗೆ ಸ್ಕೂಟಿ ಡಿಕ್ಕಿ: ಆರೋಗ್ಯ ಕೇಂದ್ರದ ಅಧಿಕಾರಿ ಸಾವು

ಡ್ಯೂಟಿ ಮುಗಿಸಿ ಬರುವಾಗ ಎತ್ತಿನ ಗಾಡಿಗೆ ಸ್ಕೂಟಿ ಡಿಕ್ಕಿ: ಆರೋಗ್ಯ ಕೇಂದ್ರದ ಅಧಿಕಾರಿ ಸಾವು

by Eha

ಕಲಬುರಗಿ: ಡ್ಯೂಟಿ ಮುಗಿಸಿ ಬರುವಾಗ ರಸ್ತೆ ಅಪಘಾತದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕಲಬುರಗಿ ಹೊರವಲಯದ ಬೇಲೂರ ಕ್ರಾಸ್ ಮದರ್ ತೆರೆಸಾ ಆಸ್ಪತ್ರೆ ಹತ್ತಿರ ನಡೆದಿದೆ. ಕನ್ಯಾಕುಮಾರಿ ಮೃತ ಯುವತಿ ಎಂದು ಗುರುತಿಸಲಾಗಿದೆ. ಕಮಲಾಪೂರ ತಾಲೂಕಿನ ಕಿಣ್ಣಿ ಸಡಕ್ ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿಯಾಗಿ ಕಾರ್ಯನಿರ್ವಹಿಸುತಿದ್ದ ಕನ್ಯಾಕುಮಾರಿ, ಎಂದಿನಂತೆ ಕರ್ತವ್ಯ ನಿರ್ವಹಿಸಿ ಸ್ಕೂಟಿ ವಾಹನದ ಮೇಲೆ ಕಲಬುರಗಿಗೆ ಬರುತ್ತಿದ್ದರು. ಮಾರ್ಗ ಮಧ್ಯೆ ಎತ್ತಿನ ಬಂಡಿಗೆ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಸುದ್ದಿ ತಿಳಿದ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಮಗಳ ಸಾವಿನ ಸುದ್ದಿ ತಿಳಿದ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಘಟನೆ ಕುರಿತು ಬೆಳಗಾವಿ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Related Posts

Leave a Comment