ಸೆಲೆಬ್ರೆಟಿಗಳಿಗೆ ಡ್ರಗ್ಸ್ ಮಾರಾಟ ಸರಬರಾಜು ಆರೋಪ ಹಿನ್ನೆಲೆ ಬಿಗ್ಬಾಸ್ ಸ್ಪರ್ಧಿಯಾಗಿದ್ದ ಮಸ್ತಾನ್ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಬೆಂಗಳೂರು: ಸೆಲೆಬ್ರೆಟಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಆರೋಪದಡಿ ಕನ್ನಡದ ಬಿಗ್ಬಾಸ್ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಮಸ್ತಾನ್ ಮನೆ ಮೇಲೆ ಗೋವಿಂದಪುರ ಪೊಲೀಸರು ದಾಳಿ ಮಾಡಿದ್ದಾರೆ.
ಡ್ರಗ್ಸ್ ಸಾಗಾಟ ಆರೋಪ ಮೇರೆಗೆ ಇಂದು ಬೆಳಗ್ಗೆ ಬಾಣಸವಾಡಿ ಉಪವಿಭಾಗದ ಎಸಿಪಿ ಸಕ್ರಿ ನೇತೃತ್ವದ ತಂಡ ಸಂಜಯ್ ನಗರದಲ್ಲಿರುವ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ.
ಸದ್ಯ ಮಸ್ತಾನ್ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.