Home Kannada ತಾಯಿಯ ಆಕ್ರಂದನವನ್ನು ನೋಡಲಾಗದೆ ಆತ್ಮಹತ್ಯೆಗೆ ಶರಣಾದ ಮಗ

ತಾಯಿಯ ಆಕ್ರಂದನವನ್ನು ನೋಡಲಾಗದೆ ಆತ್ಮಹತ್ಯೆಗೆ ಶರಣಾದ ಮಗ

by akash

ಹಾಸನ: ಕೊರೊನಾದಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ತಾಯಿಯ ಆಕ್ರಂದನವನ್ನು ನೋಡಲಾಗದೆ ಮಗನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಹಾಸನ ನಗರದ ಹಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಶರತ್ ಕುಮಾರ್(30) ಎಂದು ಗುರುತಿಸಲಾಗಿದೆ. ಶರತ್ ಕೊಡಗು ಜಿಲ್ಲೆಯ ಶನಿವಾರಸಂತೆ ಸಮೀಪದ ಮಾದರೆ ಗ್ರಾಮದವರು. ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶರತ್ ಕೆಲಸ ಬಿಟ್ಟು ಸ್ವಗ್ರಾಮಕ್ಕೆ ಹಿಂದಿರುಗಿದ್ದರು. ಮನೆಯಲ್ಲಿ ಇದ್ದ ಶರತ್ ಅವರ ತಾಯಿ ಪ್ರಮೀಳಾ ಎಂಬುವರಿಗೆ ಕೊರೊನಾ ಸೋಂಕು ತಗುಲಿ ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲು ಮಾಡಿದರು. 11ದಿನಗಳಿಂದ ಪ್ರಮೀಳಾ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ತಾಯಿ ಅನುಭವಿಸುತ್ತಿದ್ದ ಪ್ರತಿದಿನದ ನೋವು ಸಂಕಟ ಹಾಗೂ ಆಕ್ರಂದನವನ್ನು ನೋಡಿ ಶರತ್ ಬೇಸತ್ತಿದ್ದರು ಎನ್ನಲಾಗಿದೆ. ನಿನ್ನೆ ರಾತ್ರಿ ತನ್ನ ಸಹೋದರ ಶಶಿಕುಮಾರ್ ಅವರೊಂದಿಗೆ ಮಾತನಾಡಿ, ಅಮ್ಮ ತುಂಬಾ ನೋವು ಅನುಭವಿಸುತ್ತಿದ್ದಾರೆ. ನನ್ನಿಂದ ನೋಡಲು ಸಾಧ್ಯವಿಲ್ಲ ದಯಮಾಡಿ ಆಸ್ಪತ್ರೆಗೆ ಬಾ ಎಂದು ಹೇಳಿದ್ದಾರೆ. ಬಳಿಕ ರಾತ್ರಿ ಸಹೋದರ ಶಶಿಕುಮಾರ್ ಬಂದು ನೋಡಿದಾಗ ಶರತ್ ಆಸ್ಪತ್ರೆಯಲ್ಲಿ ಇರಲಿಲ್ಲ ಎಲ್ಲಾ ಕಡೆ ಹುಡುಕಾಟ ನಡೆಸಿದಾಗ ಇಂದು ಬೆಳಗ್ಗೆ ಆಸ್ಪತ್ರೆಯ ಏಳನೇ ಮಹಡಿಯ ಮೇಲೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಹಾಸನ ನಗರ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Related Posts

Leave a Comment