Home Kannada ನವ ದಂಪತಿಯ ಬೈಕ್ ತಪ್ಪಿಸಲು ಹೋಗಿ ತಡೆಗೋಡೆಗೆ ಬಸ್ ಡಿಕ್ಕಿ- ಹತ್ತಕ್ಕೂ ಹೆಚ್ಚು ಜನರಿಗೆ ಗಾಯ

ನವ ದಂಪತಿಯ ಬೈಕ್ ತಪ್ಪಿಸಲು ಹೋಗಿ ತಡೆಗೋಡೆಗೆ ಬಸ್ ಡಿಕ್ಕಿ- ಹತ್ತಕ್ಕೂ ಹೆಚ್ಚು ಜನರಿಗೆ ಗಾಯ

by Eha

ಹಾಸನ: ರಸ್ತೆ ಬದಿಯ ತಡೆಗೋಡೆಗೆ ಕೆಎಸ್‍ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ನಗರದ ಹೊರವಲಯದ ದೊಡ್ಡಪುರ ಗೇಟ್ ಬಳಿ ಘಟನೆ ನಡೆದಿದೆ. ತಿಪಟೂರಿನಿಂದ ದುದ್ದ ಮಾರ್ಗವಾಗಿ ಹಾಸನಕ್ಕೆ ಬರುತ್ತಿದ್ದ ಕೆಎ-21 ಎಫ್-0108 ನಂಬರ್ ನ ಕೆಎಸ್‍ಆರ್ ಟಿಸಿ ಬಸ್‍ಗೆ ಬೈಕ್ ಅಡ್ಡ ಬಂದಿದ್ದು, ಬೈಕ್‍ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನವ ದಂಪತಿ ಬೈಕ್ ನಲ್ಲಿ ಹೆರಗು ಕಡೆಗೆ ತೆರಳುತ್ತಿದ್ದರು ಎನ್ನಲಾಗಿದ್ದು, ಅದೃಷ್ಟವಶಾತ್ ನವ ಜೋಡಿ ಪ್ರಾಣಾಪಾಯದಿಂದ ಪಾರಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Posts

Leave a Comment