Home Kannada ನಿಂತಿದ್ದ ಟ್ಯಾಂಕರ್​​ಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಮೃತಪಟ್ಟ ಸವಾರ

ನಿಂತಿದ್ದ ಟ್ಯಾಂಕರ್​​ಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಮೃತಪಟ್ಟ ಸವಾರ

by akash

ಮಂಡ್ಯ: ನಿಂತಿದ್ದ ಟ್ಯಾಂಕರ್​​ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆ ನಾಗಮಂಗಲ ಪಟ್ಟಣದ ತೊಳಲಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ನಡೆದಿದೆ. ತುಮಕೂರು ಜಿಲ್ಲೆಯ ಕೋಡಿನಾಗಸಂದ್ರ ಗ್ರಾಮದ ವಿನಯ್ (27) ಮೃತ ದುರ್ದೈವಿ. ಈತ ನಾಗಮಂಗಲದ ಕೋಟಾಕ್​ ಮಹೇಂದ್ರ ಫೈನಾನ್ಸ್​ನಲ್ಲಿ ಕೆಲಸ ಮಾಡುತ್ತಿದ್ದ. ತಡರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಬೈಕ್​ನ ಬ್ರೇಕ್​ ಜಾಮ್ ಆಗಿ ರಸ್ತೆ ಬದಿಯಲ್ಲಿ ನಿಂತಿದ್ದ ಹೆಚ್​​ಪಿ ಗ್ಯಾಸ್ ಟ್ಯಾಂಕರ್​​ಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಅಧಿಕ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮೃತದೇಹವನ್ನು ನಾಗಮಂಗಲ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸರು, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Posts

Leave a Comment