ಉಳ್ಳಾಲ: ರಿಕ್ಷಾ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ. ಪಜೀರು ಸೇನೆರೆಬೈಲು ಸಂಜೀವ ಪೂಜಾರಿ ಎಂಬುವರ ಪುತ್ರ ಶ್ಯಾಮಪ್ರಸಾದ್ (45) ಸಾವನ್ನಪ್ಪಿದವರು. ಮಂಗಳೂರಿನಿಂದ ವಾಪಸ್ಸಾಗುವ ಸಂದರ್ಭ ಪಡೀಲ್ ಕಣ್ಣೂರಿನಿಂದ ತಲಪಾಡಿ ಶಾರದಾ ವಿದ್ಯಾ ಸಂಸ್ಥೆಗೆ ಸಹೋದರನನ್ನು ಬಿಡಲು ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ನೇತ್ರಾವತಿ ಸೇತುವೆ ಬಳಿ ಕಾರು-ರಿಕ್ಷಾ ಡಿಕ್ಕಿ.. ಆಟೋ ಚಾಲಕ ಸ್ಥಳದಲ್ಲೇ ಸಾವು
previous post