Home Kannada ಪತ್ನಿ ‌ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಕಿಮ್ಸ್​ಗೆ ಕರೆದುಕೊಂಡು ಬಂದ ಭೂಪ!

ಪತ್ನಿ ‌ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಕಿಮ್ಸ್​ಗೆ ಕರೆದುಕೊಂಡು ಬಂದ ಭೂಪ!

by Eha

ಹುಬ್ಬಳ್ಳಿ: ಪತ್ನಿಯ ಮೇಲೆ ಕೊಡಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿಯೊಬ್ಬ, ಬಳಿಕ ತಾನೇ ಆಸ್ಪತ್ರೆಗೆ ದಾಖಲಿಸಿರುವ ಘಟನೆ ಸುಳ್ಳ ಗ್ರಾಮದಲ್ಲಿ ಘಟನೆ ನಡೆದಿದೆ. ಸುಳ್ಳ ಗ್ರಾಮದ ಪವಿತ್ರಾ ಮಾದರ ಹಾಗೂ ಆಕೆಯ ಪತಿ ಈರಪ್ಪ ನಡುವೆ ಕಳೆದ ಮೂರು ದಿನಗಳಿಂದ ನಿರಂತರ ಜಗಳ ನಡೆಯುತ್ತಿತ್ತು. ಈ ಜಗಳ ಅತಿರೇಕಕ್ಕೆ ಹೋದ ಕಾರಣ, ಪತ್ನಿ ಮನೆ ಕೆಲಸ ಮಾಡುತ್ತಿದ್ದ ವೇಳೆ ಪತಿ ಈರಪ್ಪ ಕೊಡಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.

ಪವಿತ್ರಾ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಒದ್ದಾಡತೊಡಗಿದಾಗ ತಾನೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿದ್ದಾನೆ. ಸದ್ಯ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಈ ಕುರಿತು ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈರಪ್ಪನನ್ನು ವಶಕ್ಕೆ ‌ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Related Posts

Leave a Comment