Home Kannada ಪಿಎಚ್‍ಡಿ ವಿದ್ಯಾರ್ಥಿನಿಗೆ ಕಿರುಕುಳ – ಪ್ರಾಧ್ಯಾಪಕ ಬಂಧನ

ಪಿಎಚ್‍ಡಿ ವಿದ್ಯಾರ್ಥಿನಿಗೆ ಕಿರುಕುಳ – ಪ್ರಾಧ್ಯಾಪಕ ಬಂಧನ

by akash

ಮಂಗಳೂರು: ನಗರದಲ್ಲಿ ವ್ಯಾಸಂಗ ಮಾಡುತ್ತಿದ್ದ ಪಿಎಚ್‍ಡಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದಡಿ ಪ್ರಾಧ್ಯಾಪಕನೋರ್ವನನ್ನು ಮಂಗಳೂರು ಪೊಲೀಸರು ಆಂಧ್ರ ಪ್ರದೇಶದಲ್ಲಿ ಬಂಧಿಸಿದ್ದಾರೆ.ಆಂಧ್ರಪ್ರದೇಶದ ಪ್ರತಿಷ್ಠಿತ ವಿವಿಯ ಪ್ರಾಧ್ಯಾಪಕ ಡಾ.ಕೊಂಡೂರು ಸುಧೀರ್ ಕುಮಾರ್ ಬಂಧಿತ ಆರೋಪಿ. ಮಂಗಳೂರಿನ ವಿದ್ಯಾರ್ಥಿನಿ ಪ್ರಾಧ್ಯಾಪಕಿಯೊಬ್ಬರ ಮಾರ್ಗದರ್ಶನದಲ್ಲಿ ಪಿಎಚ್‍ಡಿ ಮಾಡುತ್ತಿದ್ದರು, ಈ ಮಧ್ಯೆ ಪರಿಚಯವಾದ ಸುಧೀರ್ ತನ್ನನ್ನು ಮಾರ್ಗದರ್ಶಕನಾಗಿ ನೇಮಿಸುವಂತೆ ಒತ್ತಾಯಿಸಿದ್ದ. ಆದರೆ ವಿ.ವಿಯ ಅನುಮತಿ ಕೇಳಿದಾಗ ಆತನಿಗೆ ಅರ್ಹತೆಯಿಲ್ಲ ಎಂದು ನಿರಾಕರಿಸಲಾಗಿತ್ತು. ಬಳಿಕ ವಿದ್ಯಾರ್ಥಿನಿಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದಾನೆ. ಸುಧೀರ್ ವಿದ್ಯಾರ್ಥಿನಿ ಮತ್ತು ಮನೆಯವರಿಗೆ ಕಿರುಕುಳ ನೀಡುವುದನ್ನು ಸಹಿಸಲಾಗದೆ ಪೊಲೀಸರಿಗೆ ದೂರು ನೀಡಿದ್ದರು. ವಿದ್ಯಾರ್ಥಿನಿಯ ಫೋಟೋ ಎಡಿಟ್ ಮಾಡಿ ಸಾಮಾಜಿಕ ತಾಣಗಳಲ್ಲಿ ವೈರಲ್ ಮಾಡಿದ್ದರಿಂದ ವಿದ್ಯಾರ್ಥಿನಿಯ ಮನೆಯವರ ದೂರಿನ ಹಿನ್ನೆಲೆ ಆರೋಪಿಯನ್ನು ಮಂಗಳೂರು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.

Related Posts

Leave a Comment

Translate »