Home Kannada ಪಿಕಪ್​ಗೆ ಕಂಟೇನರ್ ಲಾರಿ ಡಿಕ್ಕಿ: ಓರ್ವ ಸಾವು, ಮೂವರ ಸ್ಥಿತಿ ಗಂಭೀರ

ಪಿಕಪ್​ಗೆ ಕಂಟೇನರ್ ಲಾರಿ ಡಿಕ್ಕಿ: ಓರ್ವ ಸಾವು, ಮೂವರ ಸ್ಥಿತಿ ಗಂಭೀರ

by akash

ಸುಳ್ಯ: ಪಿಕಪ್ ವಾಹನಕ್ಕೆ ಕಂಟೇನರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಇನ್ನುಳಿದ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಜಾಲ್ಸೂರು ಗ್ರಾಮದ ಅಡ್ಕಾರಿನ ಮಾವಿನಕಟ್ಟೆ ಎಂಬಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. ಸಂಪಾಜೆ ಕಡೆಗೆ ತೆರಳುತ್ತಿದ್ದ ಪಿಕಪ್​ಗೆ ಮಂಗಳೂರು ಕಡೆಗೆ ಬರುತ್ತಿದ್ದ ಕಂಟೇನರ್ ಲಾರಿಯು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಪಿಕಪ್​ನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು. ಇವರ ಪೈಕಿ ಪೆರಾಜೆಯ ಪಾಲೆಗುಂಡಿಯ ದಿನಕರ (32) ಎಂಬವರು ಮೃತಪಟ್ಟಿದ್ದಾರೆ. ಇನ್ನುಳಿದ ಗಾಯಗೊಂಡ ಮೂವರು ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಂಟೇನರ್ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಪಿಕಪ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Comment