Home Kannada ಪೊಲೀಸ್​ ಲಾಠಿ ಸಿಲುಕಿ ಬೈಕ್​ ಸವಾರ ಸಾವು: ರೊಚ್ಚಿಗೆದ್ದ ಸಾರ್ವಜನಿಕರಿಂದ ಪೊಲೀಸರಿಗೆ ಧರ್ಮದೇಟು

ಪೊಲೀಸ್​ ಲಾಠಿ ಸಿಲುಕಿ ಬೈಕ್​ ಸವಾರ ಸಾವು: ರೊಚ್ಚಿಗೆದ್ದ ಸಾರ್ವಜನಿಕರಿಂದ ಪೊಲೀಸರಿಗೆ ಧರ್ಮದೇಟು

by Eha

ಮೈಸೂರು : ಸಂಚಾರಿ ಪೊಲೀಸ್ ತಪಾಸಣೆ ವೇಳೆ ಹ್ಯಾಂಡಲ್​​ಗೆ ಲಾಠಿ ಸಿಲುಕಿ ಯುವಕನೋರ್ವ ಮೃತಪಟ್ಟಿದ್ದು, ಸಾವಿಗೆ ಕಾರಣರಾದ ಪೊಲೀಸರಿಗೆ ಸಾರ್ವಜನಿಕರು ಧರ್ಮದೇಟು ನೀಡಿರುವ ಘಟನೆ, ನಗರದ ಹಿನ್​ಕಲ್ ನಲ್ಲಿ ನಡೆದಿದೆ. ವಿವಿ ಪುರಂ ಸಂಚಾರ ಠಾಣೆ ಪೊಲೀಸರು ಹಿನಕಲ್ ರಿಂಗ್ ರಸ್ತೆಯಲ್ಲಿ ತಪಾಸಣೆ ನಡೆಸುತ್ತಿದ್ದಾಗ, ಬೈಕ್ ಸವಾರ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಹ್ಯಾಂಡಲ್​ಗೆ ಪೊಲೀಸ್​ ಲಾಠಿ ಸಿಲುಕಿ ಆಯತಪ್ಪಿ ಬಿದ್ದಿದ್ದಾನೆ‌. ಈ ವೇಳೆ ಹಿಂಬದಿಯಿಂದ ಬಂದ ವ್ಯಾನ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದರಿಂದ ಕೆರಳಿದ ಸಾರ್ವಜನಿಕರು ಪೊಲೀಸ್ ಗಸ್ತು ವಾಹನ ಜಖಂಗೊಳಿಸಿ, ಪೊಲೀಸರನ್ನು ಅಟ್ಟಾಡಿಸಿ ಹೊಡೆದಿದ್ದಾರೆ.

ಬೈಕ್​ ಸವಾರ ಹೆಲ್ಮೆಟ್ ಧರಿಸಿದ್ದರೂ ಸಹ ಪೊಲೀಸರು ಅಡ್ಡಗಟ್ಟಿದ ಪರಿಣಾಮ ಯುವಕ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ. ತಪಾಸಣೆ ವೇಳೆ ಪೊಲೀಸ್ ಕಾನ್ಸ್​​ಟೇಬಲ್​ ಲಾಠಿ ಬೀಸಿದ ಪರಿಣಾಮ ಬೈಕ್​ನ ಹ್ಯಾಂಡಲ್​​ಗೆ ಲಾಠಿ ಸಿಲುಕಿದೆ. ಆಗ ಸವಾರ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆಂದು ಸ್ಥಳೀಯರು ಆರೋಪಿಸಿದ್ದಾರೆ. ಸದ್ಯ ಸ್ಥಳಕ್ಕೆ ಡಿಸಿಪಿ ಗೀತಾ ಪ್ರಸನ್ನ ಭೇಟಿ ನೀಡಿ, ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

Related Posts

Leave a Comment