Home Kannada ಪ್ರಯಾಣಿಕರ ಸಮಸ್ಯೆ ಆಲಿಸಲು ಮೆಜೆಸ್ಟಿಕ್​ಗೆ ಬಂದ ಸಚಿವ ಲಕ್ಷ್ಮಣ ಸವದಿ

ಪ್ರಯಾಣಿಕರ ಸಮಸ್ಯೆ ಆಲಿಸಲು ಮೆಜೆಸ್ಟಿಕ್​ಗೆ ಬಂದ ಸಚಿವ ಲಕ್ಷ್ಮಣ ಸವದಿ

by akash

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಕರ್ಫ್ಯೂ ಹಿನ್ನೆಲೆ ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದು, ರಾಜ್ಯ ಸಾರಿಗೆ ಸಂಸ್ಥೆ ಪ್ರಯಾಣಿಕರ ಅನುಕೂಲಕ್ಕಾಗಿ ವಿವಿಧ ಜಿಲ್ಲೆಗಳಿಗೆ ಬಸ್​ ವ್ಯವಸ್ಥೆ ಮಾಡಿದೆ. ಹೀಗಾಗಿ ಇಂದು ಪ್ರಯಾಣಿಕರ ಸಮಸ್ಯೆ ಆಲಿಸಲು ಮೆಜೆಸ್ಟಿಕ್ ಬಸ್​ ನಿಲ್ದಾಣಕ್ಕೆ ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಭೇಟಿ ನೀಡಿ‌ದರು. ಊರಿನತ್ತ ತೆರಳುತ್ತಿದ್ದ ಪ್ರಯಾಣಿಕರುನ್ನು ಮಾತನಾಡಿಸಿದ ಸಚಿವರು, ಸರಿಯಾಗಿ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿದರು.ಕೆಎಸ್​ಆರ್​ಟಿಸಿ ಎಂಡಿ ಶಿವಯೋಗಿ ಕಳಸದ ಕೂಡ ಬಸ್​ ನಿಲ್ದಾಣಕ್ಕೆ ಬಂದು ಪರಿಶೀಲನೆ ನಡೆಸಿದರು. ಪ್ರಯಾಣಿಕರ ದಟ್ಟಣೆ ಹೆಚ್ಚಾದಂತೆ ಹೆಚ್ಚುವರಿ ಬಸ್​ಗಳನ್ನು ಬಿಡಲು ಅಧಿಕಾರಿಗಳಿಗೆ ಸೂಚಿಸಿದರು.

Related Posts

Leave a Comment