Home Kannada ಬಸ್ ನಿಲ್ದಾಣದ ಮುಂದೆ ನಿಂತಿದ್ದ ಪ್ರಯಾಣಿಕರ ಮೇಲೆ ಹರಿದ ಸಿಮೆಂಟ್ ಲಾರಿ

ಬಸ್ ನಿಲ್ದಾಣದ ಮುಂದೆ ನಿಂತಿದ್ದ ಪ್ರಯಾಣಿಕರ ಮೇಲೆ ಹರಿದ ಸಿಮೆಂಟ್ ಲಾರಿ

by Eha

ಯಾದಗಿರಿ: ಬಸ್ ನಿಲ್ದಾಣದ ಮುಂದೆ ನಿಂತಿದ್ದ ಪ್ರಯಾಣಿಕರ ಮೇಲೆ ಸಿಮೆಂಟ್ ಲಾರಿ ಹರಿದ ಪರಿಣಾಮ, ಬಾಲಕಿ ದೇಹ ಛಿದ್ರ ಛಿದ್ರವಾಗಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಯಾದಗಿರಿ ಜಿಲ್ಲೆಯ ಗುರುಮಿಠಕಲ್ ಸಮೀಪದ ಬೋರಬಂಡದಲ್ಲಿ ಈ ದುರ್ಘಟನೆ ನಡೆದಿದೆ. ಗುರುಮಿಠಕಲ್ ಗೆ ಬರಲು ಬಸ್ ನಿಲ್ದಾಣದ ಮುಂದೆ ಪ್ರಯಾಣಿಕರು ನಿಂತಿದ್ದರು. ಈ ವೇಳೆ ವೇಗವಾಗಿ ಬಂದ ಲಾರಿ ಪ್ರಯಾಣಿಕರ ಮೇಲೆ ಹರಿದ ಪರಿಣಾಮ ಸ್ಥಳದಲ್ಲಿಯೇ ಮೂರು ವರ್ಷದ ಬಾಲಕಿ ಮೋನಿಕಾ ಮೃತಪಟ್ಟಿದ್ದಾಳೆ. ಉಳಿದ ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗೊಂಡಿದ್ದು, ಗುರುಮಿಠಕಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಕಾಲಕ್ಕೆ ಅಂಬ್ಯುಲೆನ್ಸ್ ಬಾರದ ಹಿನ್ನಲೆ 112 ಮತ್ತು ಹೈವೆ ಪ್ಯಾಟ್ರೋಲಿಂಗ್ ವಾಹನದಲ್ಲಿ ಗಾಯಗೊಂಡ ಪ್ರಯಾಣಿಕರ ಆಸ್ಪತ್ರೆಗೆ ಶಿಫ್ಟ್ ಮಾಡಿ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಸದ್ಯ ಲಾರಿ ಚಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಗುರುಮಿಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Related Posts

Leave a Comment