Home Kannada ಬಸ್ – ಬೈಕ್ ನಡುವೆ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು!

ಬಸ್ – ಬೈಕ್ ನಡುವೆ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು!

by Eha

ಶಿರಸಿ: ಸಾರಿಗೆ ಬಸ್ ಹಾಗೂ ಬೈಕ್​ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ಬೈಕ್​ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಎಸ್.ಬಿ.ಐ. ಸರ್ಕಲ್ ಬಳಿ ನಡೆದಿದೆ. ಶಿರಸಿಯ ಗಣೇಶ ನಗರದ ರವಿಚಂದ್ರ ವಡ್ಡರ್ (34) ಹಾಗೂ ಸುನೀಲ ಇಂದೂರ (26) ಮೃತರು. ರವಿಚಂದ್ರ ತಂದೆ ಹನುಮಂತಪ್ಪ ಸೋಮವಾರ ನಸುಕಿನ ಜಾವ ಮೃತಪಟ್ಟಿದ್ದು, ಅವರ ಶವಸಂಸ್ಕಾರಕ್ಕೆ ಹೂ ತರಲು ಇಬ್ಬರು ಮಾರುಕಟ್ಟೆಗೆ ತೆರಳುತ್ತಿದ್ದರು. ಈ ವೇಳೆ ಇನ್ನೊಂದು ರಸ್ತೆಯಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ದ್ವಿಚಕ್ರ ವಾಹನ ಬಸ್ ಅಡಿಗೆ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ ಎನ್ನಲಾಗ್ತಿದೆ. ಸ್ಥಳಕ್ಕೆ ಡಿವೈಎಸ್​ಪಿ ರವಿ ನಾಯ್ಕ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ನಗರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

Related Posts

Leave a Comment