Home Kannada ಬೆಂಗಳೂರಲ್ಲಿ 20 ಲಕ್ಷ ಮೌಲ್ಯದ ಮಾದಕ ವಸ್ತು ಜಪ್ತಿ, ಡ್ರಗ್​ ಪೆಡ್ಲರ್​ಗಳ ಬಂಧನ

ಬೆಂಗಳೂರಲ್ಲಿ 20 ಲಕ್ಷ ಮೌಲ್ಯದ ಮಾದಕ ವಸ್ತು ಜಪ್ತಿ, ಡ್ರಗ್​ ಪೆಡ್ಲರ್​ಗಳ ಬಂಧನ

by Eha

ಬೆಂಗಳೂರು: ನಗರದಲ್ಲಿ ಇಬ್ಬರು ನೈಜೀರಿಯನ್ ಪ್ರಜೆಗಳು ಸೇರಿದಂತೆ ನಾಲ್ವರು ಡ್ರಗ್​ ಪೆಡ್ಲರ್​ಗಳನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಬಂಧಿಸಿ, 20 ಲಕ್ಷ ರೂ. ಮೌಲ್ಯದ ಮಾದಕ ವಸ್ತು, 2 ದ್ವಿಚಕ್ರ ವಾಹನ ಮತ್ತು ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಆಜಾ ಫ್ರಾನ್ಸ್ ಸಿಸ್, ಚರ್ಸ್ ಚಿಮಾ, ಮಲಂಗ್ ಪಾಷಾ, ಜಾಸಿರ್ ಕಾಂಡೆ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರು ಐಟಿ ಉದ್ಯೋಗಿಗಳು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಬಂಧಿತರಿಂದ 200 ಎಕ್ಸ್​ಟಿಸಿ ಮಾತ್ರೆ, 153 ಗ್ರಾಂ ಎಂಡಿಎಂಎ, 5 ಮೊಬೈಲ್ ಫೋನ್, ಮಾರಕಾಸ್ತ್ರಗಳು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Comment