ಬೆಳಗಾವಿ: ಬಡತನವನ್ನೇ ಬಂಡವಾಳವನ್ನಾಗಿ ಮಾಡಿಕೊಂಡ ಇಲ್ಲೊಬ್ಬ ಗ್ರಾಮ ಪಂಚಾಯಿತಿ ಸದಸ್ಯ 20 ವರ್ಷದ ಯುವತಿಗೆ ಆಮಿಷಗಳನ್ನೊಡ್ಡಿ ಲೈಂಗಿಕವಾಗಿ ಬಳಿಸಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಯುವತಿ ಜೊತೆಗಿರುವ ಪೋಟೋ, ವಿಡಿಯೋಗಳನ್ನು ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾನೆ ಎಂದು ಯುವತಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಬಗ್ಗೆ ಯುವತಿಯ ತಂದೆ-ತಾಯಿ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಾಲೂಕಿನ ದೇಸೂರ ಗ್ರಾಮದ ಪಂಚಾಯಿತಿ ಸದಸ್ಯ ಸಂತೋಷ ಮರಗಾಳೆ ವಿರುದ್ಧ ಯುವತಿಗೆ ಮೋಸ ಮಾಡಿದ ಆರೋಪ ಕೇಳಿಬಂದಿದೆ. ಇದಲ್ಲದೇ ಈತ ಗ್ರಾಮದಲ್ಲಿರುವ ಹಲವು ಯುವತಿಯರನ್ನು ಹೀಗೆ ಬಳಸಿಕೊಂಡಿದ್ದಾನೆ ಎಂದು ಇತರ ಗ್ರಾಮಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಈ ಹಿನ್ನೆಲೆ ಸಂತೋಷ ಮರಗಾಳೆ ವಿರುದ್ಧ ಗ್ರಾಮಸ್ಥರೆಲ್ಲರೂ ಸೇರಿ ಆತನ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನ ರದ್ದುಪಡಿಸಬೇಕೆಂದು ಗ್ರಾಮ ಪಂಚಾಯಿತಿಯಲ್ಲಿ ಠರಾವು ಪಾಸ್ ಮಾಡಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ: ಗ್ರಾ.ಪಂ. ಸದಸ್ಯನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ
previous post