Home Kannada ಬೈಕಂಪಾಡಿ ಎಪಿಎಂಸಿ ರೈಲ್ವೆ ಹಳಿ ಬಳಿ ವ್ಯಕ್ತಿಯ ಮೃತದೇಹ ಪತ್ತೆ: ಕತ್ತು ಕೊಯ್ದು ಕೊಲೆ ಶಂಕೆ

ಬೈಕಂಪಾಡಿ ಎಪಿಎಂಸಿ ರೈಲ್ವೆ ಹಳಿ ಬಳಿ ವ್ಯಕ್ತಿಯ ಮೃತದೇಹ ಪತ್ತೆ: ಕತ್ತು ಕೊಯ್ದು ಕೊಲೆ ಶಂಕೆ

by Eha

ಮಂಗಳೂರು: ನಗರದ ಬೈಕಂಪಾಡಿ ಎಪಿಎಂಸಿ ರೈಲ್ವೆ ಹಳಿ ಬಳಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದ್ದು, ಕತ್ತು ಕೊಯ್ದು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಬೈಕಂಪಾಡಿ ಕೈಗಾರಿಕಾ ಪ್ರದೇಶದ ಕಾರ್ಮಿಕ ಯಲ್ಲಪ್ಪ ಕೊಲೆಯಾದ ವ್ಯಕ್ತಿ. ಕಾರ್ಮಿಕನ ಮೃತದೇಹ ಪತ್ತೆಯಾದ ಪ್ರದೇಶದಲ್ಲಿ ಜನ ಸಂಚಾರ ವಿರಳವಾಗಿದ್ದು, ರಾತ್ರಿ ವೇಳೆ ಈ ಕೃತ್ಯ ಎಸಗಲಾಗಿದೆ ಎಂಬ ಶಂಕೆ ವ್ಯಕ್ತಪಡಿಸಲಾಗಿದೆ.

ಇಂದು ಬೆಳಗ್ಗೆ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್ ಹಾಗೂ ಪಣಂಬೂರು ಪೊಲೀಸ್ ಠಾಣಾ ಇನ್ಸ್​ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶ್ವಾನದಳ, ಬೆರಳಚ್ಚು ತಜ್ಞರು ಹಾಗೂ ಪೊಲೀಸರು ಭೇಟಿ ನೀಡಿ ಶವ ಮಹಜರು ನಡೆಸಿದ್ದಾರೆ. ಈ ಕುರಿತು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Posts

Leave a Comment