ಬೆಂಗಳೂರು: ದ್ವಿಚಕ್ರ ವಾಹನಗಳು ಹಾಗೂ ಮೊಬೈಲ್ಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಚಾಮರಾಜಪೇಟೆ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆ ನಡೆಸಿದ ಪೊಲೀಸರು 11.75 ಲಕ್ಷ ರೂ. ಮೌಲ್ಯದ 5 ದ್ವಿಚಕ್ರ ವಾಹನ, ವಿವಿಧ ಕಂಪನಿಯ 65 ಮೊಬೈಲ್ ಸೇರಿ ಮೂವರು ಬಂಧಿತರಿಂದ 1. 75 ಲಕ್ಷ ನಗದು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಆರೋಪಿಗಳನ್ನು ಚಾಮರಾಜಪೇಟೆ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಬೈಕ್, ಮೊಬೈಲ್ ಕಳ್ಳರ ಬಂಧನ: 65 ಮೊಬೈಲ್, 5 ದ್ವಿಚಕ್ರ ವಾಹನ ವಶಕ್ಕೆ
previous post