Home Kannada ಭೀಕರ ರಸ್ತೆ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು, ಇಬ್ಬರ ಸ್ಥಿತಿ ಗಂಭೀರ

ಭೀಕರ ರಸ್ತೆ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು, ಇಬ್ಬರ ಸ್ಥಿತಿ ಗಂಭೀರ

by Eha

ಬಾರ್ಮರ್​ (ರಾಜಸ್ಥಾನ): ಟ್ರಕ್​‌ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಬಾರ್ಮರ್​​ ಜಿಲ್ಲೆಯ ದುರ್ಗಾಪುರ ಬಳಿಯ ಹೆದ್ದಾರಿಯಲ್ಲಿ ಸಂಭವಿಸಿದೆ. ಬಾರ್ಮರ್​ ಜಿಲ್ಲೆಯ ಮದ್ಪುರ – ದುರ್ಗಾಪುರ ಹೆದ್ದಾರಿ ಬಳಿ ಬೆಳಗ್ಗೆ 9 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜೋಧಪುರಕ್ಕೆ ಕಳುಹಿಸಲಾಗಿದೆ. ಮೃತರು ಗಂಗಾಪುರದಿಂದ ನಕೋಡಾದ ಯಾತ್ರಾ ಸ್ಥಳಕ್ಕೆ ಹೋಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ರಸ್ತೆ ಅಪಘಾತದಿಂದ ಟ್ರಾಫಿಕ್​ ಜಾಮ್​ ಉಂಟಾಗಿದ್ದು, ಕೆಲ ಕಾಲ ವಾಹನ ಸವಾರರು ಪರದಾಡುವಂತಾಯಿತು. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಂತರ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

Related Posts

Leave a Comment