Home Kannada ಮಂಗಳೂರು ಏರ್​ಪೋರ್ಟ್​ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 61 ಲಕ್ಷ ರೂ. ಮೌಲ್ಯದ ಚಿನ್ನ ವಶ

ಮಂಗಳೂರು ಏರ್​ಪೋರ್ಟ್​ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 61 ಲಕ್ಷ ರೂ. ಮೌಲ್ಯದ ಚಿನ್ನ ವಶ

by Eha

ಮಂಗಳೂರು: ಬಜ್ಪೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸಲಾಗುತ್ತಿದ್ದ ಎರಡು ಪ್ರಕರಣಗಳನ್ನು ಪತ್ತೆ ಹಚ್ಚಿದ ಕಸ್ಟಮ್ಸ್​​ ಅಧಿಕಾರಿಗಳು, 61 ಲಕ್ಷ ರೂ. ಮೌಲ್ಯದ ಚಿನ್ನ ವಶಪಡಿಸಿಕೊಂಡಿದ್ದಾರೆ. ಎರಡು ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕೇರಳದ ಕಾಸರಗೋಡಿನ ಅಬ್ದುಲ್ ರಶೀದ್ ಮತ್ತು ಅಬ್ದುಲ್ ನಿಶಾದ್ ಬಂಧಿತರು. ಕಾಸರಗೋಡು ಜಿಲ್ಲೆ ಪೈವಳಿಕೆಯ ಅಬ್ದುಲ್ ರಶೀದ್​​ನನ್ನು ಫೆ. 23ರಂದು ವಿಮಾನ ನಿಲ್ದಾಣದ ಶೌಚಾಲಯದ ಬಳಿಯಿಂದ ವಶಕ್ಕೆ ಪಡೆದಾಗ, ಆತ ಬಟ್ಟೆಯಲ್ಲಿ ಬಚ್ಚಿಟ್ಟು ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಆತನಿಂದ 30,75,160 ರೂ. ಮೌಲ್ಯದ 638 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಫೆ. 24ರಂದು ಕಾಸರಗೋಡು ಜಿಲ್ಲೆಯ ಅಬ್ದುಲ್ ನಿಶಾದ್ ಎಮರ್ಜೆನ್ಸಿ ಲೈಟ್​ನೊಳಗೆ ಬಚ್ಚಿಟ್ಟು ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಈತನಿಂದ 30,26,933 ರೂ. ಮೌಲ್ಯದ 629 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ.

Related Posts

Leave a Comment