Home Kannada ಮಣ್ಣಿನಡಿ ಸಿಲುಕಿದ ಕಾರ್ಮಿಕರು: ಪೊಲೀಸರಿಂದ ರಕ್ಷಣಾ ಕಾರ್ಯ

ಮಣ್ಣಿನಡಿ ಸಿಲುಕಿದ ಕಾರ್ಮಿಕರು: ಪೊಲೀಸರಿಂದ ರಕ್ಷಣಾ ಕಾರ್ಯ

by Eha

ಪುತ್ತೂರು: ಜೆಸಿಬಿಯಲ್ಲಿ ಮಣ್ಣು ಅಗೆಯುವ ವೇಳೆ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ಪಾಣಾಜೆ ಗ್ರಾಮದ‌ ಕೋಟೆ ರಸ್ತೆಯ ಕೆಮಾಜೆ ಎಂಬಲ್ಲಿ ನಡೆದಿದೆ. ಮಣ್ಣಿನಡಿ ಸಿಲುಕಿರುವ ಕಾರ್ಮಿಕರನ್ನು ಪಾಣಾಜೆ ಗ್ರಾಮದ ಪಾರ್ಪಳದವರು ಎಂದು ಹೇಳಲಾಗುತ್ತಿದ್ದು, ಕೋಳಿ ತ್ಯಾಜ್ಯ ಹಾಕುತ್ತಿದ್ದ ಗುಂಡಿಯ ಪೈಪ್ ಸರಿಪಡಿಸಲು ಇಳಿದಿದ್ದ ವೇಳೆ ಪೈಪ್ ಮುರಿದು ಬಿದ್ದು ಕಾರ್ಮಿಕರು ಹೊಂಡಕ್ಕೆ ಬಿದ್ದಿದ್ದಾರೆ. ಇದೇ ವೇಳೆ, ಪಕ್ಕದಲ್ಲಿಯೇ ಜೆಸಿಬಿ ಮಣ್ಣು ಅಗೆಯುತ್ತಿರುವುದಿಂದ ಮಣ್ಣು ಜರಿದು ಹೊಂಡದೊಳಗೆ ಬಿದ್ದಿದೆ. ಪರಿಣಾಮ ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದಾರೆ. ಸ್ಥಳಕ್ಕೆ ಸಂಪ್ಯ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಮಣ್ಣಿನಡಿ ಸಿಲುಕಿರುವವರ ರಕ್ಷಿಸುವ ಕಾರ್ಯ ಮಾಡುತ್ತಿದ್ದಾರೆ.

Related Posts

Leave a Comment