Home Kannada ಮನೆ ಮುಂದೆ ನಿಲ್ಲಿಸಿದ್ದ ಬೈಕ್​​​ ಕಳವು ಮಾಡುತ್ತಿದ್ದ ಆರೋಪಿಯ ಬಂಧನ

ಮನೆ ಮುಂದೆ ನಿಲ್ಲಿಸಿದ್ದ ಬೈಕ್​​​ ಕಳವು ಮಾಡುತ್ತಿದ್ದ ಆರೋಪಿಯ ಬಂಧನ

by akash

ಬೆಂಗಳೂರು: ಪಶ್ಚಿಮ ವಿಭಾಗದ ವಿಜಯನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಮೇ 25ರಂದು ಎಂ.ಸಿ ಲೇಔಟ್ ಸರ್ವಿಸ್ ರಸ್ತೆಯಲ್ಲಿ 30 ಸಾವಿರ ರೂ. ಬೆಲೆ ಬಾಳುವ ಯಮಹಾ ಫ್ಯಾಸಿನೋ ದ್ವಿಚಕ್ರ ವಾಹನ ಕಳವಾಗಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನಾಯತ್ (20) ಬಂಧಿತ ಆರೋಪಿ. ಬಂಧಿತನಿಂದ 1.80 ಲಕ್ಷ ರೂಪಾಯಿ ಮೌಲ್ಯದ 7 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯ ವಿರುದ್ಧ ವಿಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ. ಎಸ್​​ಐ ಸತೀಶ್ ಕುಮಾರ್ ನೇತೃತ್ವದ ತಂಡದ ಕ್ಷಿಪ್ರ ಕಾರ್ಯಾಚರಣೆಗೆ ಡಿಸಿಪಿ ಸಂಜೀವ್ ಪಾಟೀಲ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related Posts

Leave a Comment