Home Kannada ಮಹಾತ್ಮ ಗಾಂಧಿ ನರೇಗಾ ಯೋಜನೆ ರಾಜ್ಯ ಮಟ್ಟದ ಪ್ರಶಸ್ತಿಗೆ ಸುನೀತಾ ಮಂಜುನಾಥ್ ಆಯ್ಕೆ

ಮಹಾತ್ಮ ಗಾಂಧಿ ನರೇಗಾ ಯೋಜನೆ ರಾಜ್ಯ ಮಟ್ಟದ ಪ್ರಶಸ್ತಿಗೆ ಸುನೀತಾ ಮಂಜುನಾಥ್ ಆಯ್ಕೆ

by Eha

ಬೆಳ್ತಂಗಡಿ: ಮಹಾತ್ಮಗಾಂಧಿ ನರೇಗಾ ಯೋಜನೆ ರಾಜ್ಯ ಮಟ್ಟದ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕು ಓಡಿಲ್ನಾಳ ಗ್ರಾಮದ ನಿವಾಸಿ ಸುನೀತಾ ಮಂಜುನಾಥ್ ಆಯ್ಕೆಯಾಗಿದ್ದಾರೆ. ಇವರು 2020-21 ನೇ ಸಾಲಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ್ದಕ್ಕಾಗಿ ಹಾಗೂ ವಿಜಯಪುರ ಜಿಲ್ಲೆಯಲ್ಲಿ ವಿಶೇಷ ಐಇಸಿ ಸಂಯೋಜಕರಾಗಿ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿದ್ದಕ್ಕಾಗಿ ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಏ. 09 ರಂದು ಹುಬ್ಬಳ್ಳಿಯ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರುಗಲಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಆಪ್ತಕಾರ್ಯದರ್ಶಿ ಮಂಜುನಾಥ್​ರ ಪತ್ನಿಯಾಗಿರುವ ಸುನೀತಾ ಪ್ರಸ್ತುತ ಬೆಳ್ತಂಗಡಿ ತಾಲೂಕು ಪಂಚಾಯತ್​ನಲ್ಲಿ ನರೇಗಾ ಯೋಜನೆಯ ಮಾಹಿತಿ, ಶಿಕ್ಷಣ, ಸಂವಹನ ಸಂಯೋಜಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Related Posts

Leave a Comment