Home Kannada ಮಾಜಿ ಶಾಸಕ ವಸಂತ್ ಅಸ್ನೋಟಿಕರ್ ಹತ್ಯೆಗೈದವನಿಗೆ ಜೀವಾವಧಿ ಶಿಕ್ಷೆ

ಮಾಜಿ ಶಾಸಕ ವಸಂತ್ ಅಸ್ನೋಟಿಕರ್ ಹತ್ಯೆಗೈದವನಿಗೆ ಜೀವಾವಧಿ ಶಿಕ್ಷೆ

by akash

ಕಾರವಾರ: ಅಂದಿನ ಕಾರವಾರ-ಜೋಯಿಡಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ವಸಂತ್ ಅಸ್ನೋಟಿಕರ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದ ಮುಂಬೈ ಮೂಲದ ಶಾರ್ಪ್ ಶೂಟರ್ ಸಂಜಯ್ ಮೋಹಿತೆಗೆ ಜೀವಾವಧಿ ಶಿಕ್ಷೆ ಹಾಗೂ 68 ಸಾವಿರ ರೂ. ದಂಡ ವಿಧಿಸಿ ಶಿರಸಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಶಾಂತವೀರ ಶಿವಪ್ಪ, ಅಪರಾಧಿಗೆ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದ್ದಾರೆ. ಸರ್ಕಾರಿ ಅಭಿಯೋಜಕಿ ಸುನಂದಾ ಮಡಿವಾಳರ ವಾದ ಮಂಡಿಸಿದ್ದು, ಹಲವು ವರ್ಷದ ವಾದ, ವಿವಾದದ ನಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ. ಫೆ.19, 2000ರಂದು ಕಾರವಾರ ನಗರದ ದೈವಜ್ಞ ಭವನದ ಎದುರು ಮಗಳ ಮುದುವೆ ಸಂಭ್ರಮದಲ್ಲಿದ್ದ ಶಾಸಕ ವಸಂತ್ ಆಸ್ನೋಟಿಕರ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಯಾಗಿದ್ದ ದಿಲೀಪ್ ನಾಯ್ಕ 2004ರಲ್ಲಿ ಹತ್ಯೆ ಆಗಿದ್ದ. ಉಳಿದ ಆರೋಪಿಗಳಾದ ಬಾಬು, ಅಂತೋನಿಯನ್ನು ಮುಂಬೈ ಪೊಲೀಸರು ಎನ್ ಕೌಂಟರ್ ಮಾಡಿದ್ದರು. ಪ್ರಕರಣದ ತನಿಖೆ ನಡೆಸಿದ್ದ ಅಪರಾಧ ತನಿಖಾ ದಳ (ಸಿಐಡಿ) ದೋಷಾರೋಪ ಪಟ್ಟಿ ಸಲ್ಲಿಸಿತ್ತು.

Related Posts

Leave a Comment