Home Kannada ಮಾಜಿ ಸಚಿವ ಯು.ಟಿ.ಖಾದರ್ ಕಾರ್ ಅಪಘಾತ

ಮಾಜಿ ಸಚಿವ ಯು.ಟಿ.ಖಾದರ್ ಕಾರ್ ಅಪಘಾತ

by Eha

ದಾವಣಗೆರೆ: ಮಾಜಿ ಸಚಿವ ಯು.ಟಿ.ಖಾದರ್ ಪ್ರಯಾಣಿಸುತ್ತಿದ್ದ ಕಾರ್ ದಾವಣಗೆರೆಯ ಅನುಗೋಡು ಗ್ರಾಮದ ಬಳಿ ಅಪಘಾತಕ್ಕೊಳಗಾಗಿದೆ. ಮಾಜಿ ಸಚಿವರು ಬೆಂಗಳೂರಿನತ್ತ ಪ್ರಯಾಣ ಬೆಳೆಸುತ್ತಿರುವಾಗ ಕಾರ್ ಮುಂದೆ ಹೋಗುತ್ತಿದ್ದ ಕಂಟೇನರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನ ಬಾನೆಜ್ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಕಾರ್ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತ ಸ್ಥಳಕ್ಕೆ ಎಸ್.ಪಿ. ಹನುಮಂತರಾಯ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಳಿಕ ಯು.ಟಿ. ಖಾದರ್ ಮತ್ತೊಂದು ವಾಹನದ ಮೂಲಕ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.

Related Posts

Leave a Comment