Home Kannada ಮಾಸ್ಕ್ ಇಲ್ಲದವರಿಗೆ ಹಾರ ಹಾಕಿ ಸ್ಥಳದಲ್ಲೇ ಕೋವಿಡ್ ಟೆಸ್ಟ್

ಮಾಸ್ಕ್ ಇಲ್ಲದವರಿಗೆ ಹಾರ ಹಾಕಿ ಸ್ಥಳದಲ್ಲೇ ಕೋವಿಡ್ ಟೆಸ್ಟ್

by akash

ಚಿಕ್ಕೋಡಿ(ಬೆಳಗಾವಿ): ಜಿಲ್ಲೆಯಲ್ಲಿ ಮಾಸ್ಕ್ ಇಲ್ಲದೆ ಓಡಾಡುವ ಸಾರ್ವಜನಿಕರಿಗೆ ಹೂವಿನ ಹಾರ ಹಾಕಿ, ಸ್ಥಳದಲ್ಲೇ ಕೋವಿಡ್ ಪರೀಕ್ಷೆ ನಡೆಸುವ ಮೂಲಕ ಕೊರೊನಾ ನಿಯಂತ್ರಣಕ್ಕೆ ಅಧಿಕಾರಿಗಳು ಹೊಸ ಐಡಿಯಾ ಮಾಡಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ತಾಲೂಕಾಡಳಿತದಿಂದ ಟಫ್ ರೂಲ್ಸ್ ಜಾರಿ ಮಾಡಿದ್ದರು ಕೂಡ ಸಾರ್ವಜನಿಕರು ಮಾತ್ರ ಮಾಸ್ಕ್ ಇಲ್ಲದೆ ಸಂಚಾರ ಮಾಡುತ್ತಿದ್ದಾರೆ. ಇದನ್ನು ಕಂಡು ಜನರಿಗೆ ಬುದ್ಧಿ ಕಲಿಸುವ ನಿಟ್ಟಿನಲ್ಲಿ ಮಾಸ್ಕ್ ಧರಿಸದೆ ಬಂದ ಮಹಾನುಭಾವರಿಗೆ ಹಾರ ಹಾಕಿ, ಕೋವಿಡ್ ಪರೀಕ್ಷೆಯನ್ನು ಸ್ಥಳದಲ್ಲೇ ಅಧಿಕಾರಿಗಳು ನಡೆಸಿದ್ದಾರೆ. ಅಥಣಿ ತಹಶೀಲ್ದಾರ್ ದುಂಡಪ್ಪಾ ಕೋಮಾರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಸಾರ್ವಜನಿಕರು ಬೇಡ ಬೇಡ ಎಂದರೂ ಬಿಡದೇ ಸ್ಥಳದಲ್ಲೇ ಕೋವಿಡ್ ಟೆಸ್ಟ್ ಮಾಡಿ ಕೊರೊನಾ ಜಾಗೃತಿ ಜೊತೆಗೆ ಕಠಿಣ ನಿಯಮಗಳನ್ನು ಅಥಣಿ ತಾಲೂಕಾಡಳಿತ ಜಾರಿಗೊಳಿಸಿದೆ. ಮಾಸ್ಕ್ ಇಲ್ಲದ ಬೈಕ್ ಸವಾರರಿಗೆ ಸರಿಯಾದ ಪಾಠ ಕಲಿಸುವದರ ಜೊತೆಗೆ ಮಾರುಕಟ್ಟೆಯಲ್ಲಿ ಬೇಕಾಬಿಟ್ಟಿಯಾಗಿ ಓಡಾಡುವವರಿಗೆ ತಾಲೂಕಾಡಳಿತ ಬಿಸಿ ಮುಟ್ಟಿಸಿದೆ. ಕೊರೊನಾ ಜಾಗೃತಿ ಕಾರ್ಯಾಚರಣೆಯಲ್ಲಿ ಪುರಸಭೆ, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಭಾಗಿಯಾಗಿದ್ದರು.

Related Posts

Leave a Comment