ಮೈಸೂರು: ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ಮೂವರು ಮಹಿಳೆಯರನ್ನ ರಕ್ಷಣೆ ಮಾಡಿ, ಇಬ್ಬರನ್ನು ಬಂಧಿಸಿರುವ ಘಟನೆ ಕಾಮನಕೇರಿ ಹುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಎಎಸ್ಪಿ ಶಿವಕುಮಾರ್ ಮಾನವ ಕಳ್ಳಸಾಗಣೆ ನಿಷೇಧ ಘಟಕದ ಸಿಬ್ಬಂದಿಯೊಂದಿಗೆ ದಾಳಿ ಮಾಡಿದ್ದಾರೆ. ಈ ವೇಳೆ ಉತ್ತರ ಭಾರತದ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಮೂರು ಜನ ಮಹಿಳೆಯರನ್ನು ರಕ್ಷಿಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.