Home Kannada ಲಾರಿ ಡಿಕ್ಕಿಯಾಗಿ ಕ್ಯಾಂಟರ್ ಚಾಲಕ ದುರ್ಮರಣ

ಲಾರಿ ಡಿಕ್ಕಿಯಾಗಿ ಕ್ಯಾಂಟರ್ ಚಾಲಕ ದುರ್ಮರಣ

by Eha

ವಿಜಯಪುರ: ಲಾರಿ ಹಾಗೂ ಕ್ಯಾಂಟರ್ ಡಿಕ್ಕಿಯಾದ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಹೊರ ಭಾಗದ ಎನ್‍ಎಚ್ 218ರಲ್ಲಿ ನಡೆದಿದೆ. ಘಟನೆಯಲ್ಲಿ ಕ್ಯಾಂಟರ್ ಚಾಲಕ ವಿಕಾಸ್ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ವಿಕಾಸ್ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆ ಬಾರ್ಸಿ ತಾಲೂಕಿನ ಪಾನಗಾವ್ ನಿವಾಸಿ ಎಂದು ತಿಳಿದು ಬಂದಿದೆ. ಲಾರಿ ಚಾಲಕ, ಕ್ಲಿನರ್ ಹಾಗೂ ಕ್ಯಾಂಟರ್ ಚಾಲಕನಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನ ಕೊಲ್ಹಾರ ಸರ್ಕಾರಿ ಆಸ್ಪತ್ತೆಗೆ ದಾಖಲಿಸಲಾಗಿದೆ. ಈ ಸಂಬಂಧ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Comment