Home Kannada ವಾಹನ ಪಲ್ಟಿಯಾಗಿ ಮೂವರು ಸಾವು: 30 ಮಂದಿಗೆ ಗಾಯ

ವಾಹನ ಪಲ್ಟಿಯಾಗಿ ಮೂವರು ಸಾವು: 30 ಮಂದಿಗೆ ಗಾಯ

by Eha

ಅಲಿಗಢ (ಉತ್ತರ ಪ್ರದೇಶ): ಟಾಟಾ ಮ್ಯಾಜಿಕ್ ವಾಹನ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, 30 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ನಡೆದಿದೆ. ಗಾಯಾಳುಗಳನ್ನು ಅಲಿಗಢದ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮುಂಭಾಗದಿಂದ ಬರುತ್ತಿದ್ದ ಟ್ರಕ್​​​ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿಕೊಳ್ಳಲು ಹೋಗಿ ಟಾಟಾ ಮ್ಯಾಜಿಕ್ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ. ಪರಿಣಾಮ ವಾಹನ ಪಲ್ಟಿಯಾಗಿ ಹಳ್ಳಕ್ಕೆ ಬಿದ್ದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Related Posts

Leave a Comment