Home Kannada ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾವು

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾವು

by Eha

ಬೆಳ್ತಂಗಡಿ: ವಿಷ ಪದಾರ್ಥ ಸೇವಿಸಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲು ದೇವಗಿರಿ ನಿವಾಸಿ ಬಿಜು ಎಂಬವರ ಪುತ್ರಿ ರಿನ್ಸಿ (20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಗುರುದೇವ ಕಾಲೇಜಿನ ಪದವಿ ವಿದ್ಯಾರ್ಥಿನಿ ಕಳೆದ ಆರು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ತಕ್ಷಣ ಅವಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Comment