Home Kannada ಸೋಂಕಿತೆ ಮೇಲೆ ಆ್ಯಂಬುಲೆನ್ಸ್​​ ಡ್ರೈವರ್​ನಿಂದ ಅತ್ಯಾಚಾರಕ್ಕೆ ಯತ್ನ, ಆರೋಪ!

ಸೋಂಕಿತೆ ಮೇಲೆ ಆ್ಯಂಬುಲೆನ್ಸ್​​ ಡ್ರೈವರ್​ನಿಂದ ಅತ್ಯಾಚಾರಕ್ಕೆ ಯತ್ನ, ಆರೋಪ!

by akash

ಕಲಬುರಗಿ: ಕೊರೊನಾ ಸೋಂಕಿತೆ ಮೇಲೆ ಆ್ಯಂಬುಲೆನ್ಸ್ ಚಾಲಕನೋರ್ವ ಅತ್ಯಾಚಾರಕ್ಕೆ ಯತ್ನಿಸಿದ್ದಾನೆಂಬ ಆರೋಪ ಕೇಳಿಬಂದಿದೆ. ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಮಧ್ಯರಾತ್ರಿ ಈ ಘಟನೆ ನಡೆದಿದೆ. ಜಿಮ್ಸ್​​​ನಲ್ಲಿರುವ ಜಯದೇವ ಹೃದ್ರೋಗ ಕೇಂದ್ರದ ರೂಮ್ ನಂ. 429ರಲ್ಲಿ ಚಿಕಿತ್ಸೆ ಪಡೆಯುತ್ತಿರುವ 25 ವರ್ಷದ ಮಹಿಳಾ ರೋಗಿ ಮೇಲೆ ಖಾಸಗಿ ಆ್ಯಂಬುಲೆನ್ಸ್ ಚಾಲಕ ಪಿಂಟು ಎಂಬಾತ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಮಧ್ಯರಾತ್ರಿ ಮಹಿಳೆ ಮಲಗಿದ್ದಾಗ ಆಕೆಯ ಡೈಪರ್ ಮತ್ತು ಯೂರಿನ್ ಪೈಪ್ ತೆಗೆದು ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ಕಿರುಚಾಡಿದ್ದು, ಆರೋಪಿ ಪರಾರಿಯಾಗಿದ್ದಾನೆ ಎಂದು ಮಹಿಳೆಯ ಸಂಬಂಧಿಯೊಬ್ಬರು ತಿಳಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸುತ್ತಿದ್ದಾರೆ.

Related Posts

Leave a Comment